ಐಪಿಎಲ್ ಪಂದ್ಯವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದಕ್ಕಾಗಿ ಖ್ಯಾತ ನಟಿ ತಮನ್ನಾ ಭಾಟಿಯಾಗೆ (Tamannaah Bhatia) ಸಂಕಷ್ಟ ಎದುರಾಗಿದೆ. ಅವರಿಗೆ ಮುಂಬೈ (Mumbai) ಪೊಲೀಸರು ಸಮನ್ಸ್ ಜಾರಿ ಮಾಡಿದದ್ದಾರೆ . ಏಪ್ರಿಲ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
2023 ರ ಐಪಿಎಲ್ (IPL) ಅಕ್ರಮವಾಗಿ ಪಂದ್ಯ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದ್ದು, ವಯಾಕಾಮ್‌ಗೆ ಕೋಟ್ಯಂತರ ರೂಪಾಯಿಗಳ ನಷ್ಟವನನು ಉಂಟುಮಾಡಿದ ಪ್ರಕರಣ ಇದಾಗಿದೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ಕೇವಲ ತಮನ್ನಾ ಮಾತ್ರವಲ್ಲ ಗಾಯಕ ಬಾದ್‌ಶಾ , ನಟ ಸಂಜಯ್ ದತ್‌ಗೂ ಸಮನ್ಸ್ ನೀಡಲಾಗಿದೆ. ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವುದರಿಂದ ವಿಚಾರಣೆಗೆ ಹಾಜರಾಗಲು ಮತ್ತಷ್ಟು ಸಮಯ ಕೇಳಿದ್ದಾರೆ. ಇದನ್ನೂ ಓದಿ: ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ
ಐಪಿಎಲ್ ಪಂದ್ಯ ಪ್ರಸಾರದ ಹಕ್ಕನ್ನು ಹೊಂದಿರುವ ವಯಾಕಾಮ್, ಈ ನಟ ನಟಿಯರ ವಿರುದ್ಧ ದೂರು ನೀಡಿತ್ತು. ದೂರಿಗೆ ಸಂಬಂಧಿಸಿದಂತೆ ಈ ಹಿಂದೆ ಸಂಜಯ್ ದತ್ ಅವರಿಗೆ, ಈಗ ತಮನ್ನಾಗೆ ನೋಟಿಸ್ ಜಾರಿ ಮಾಡಿದೆ

