ಬೆಂಗಳೂರು: ಅಡಿಗೆ ಅನಿಲ (LPG) ಸರಬರಾಜು ಸಂಬಂಧಿತ ವಿಷಯಗಳ ಕುರಿತು ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ K. H. Muniyappa ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅನಿಲ ಕಂಪನಿಗಳ ಅಧಿಕಾರಿಗಳು ಹಾಗೂ ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿಗಳು ಭಾಗವಹಿಸಿದರು.
ಸಭೆಯಲ್ಲಿ Indian Oil Corporation (IOC), Bharat Petroleum (BPC), Hindustan Petroleum (HPC) ಮತ್ತು GAIL ಸಂಸ್ಥೆಗಳ ಅಧಿಕಾರಿಗಳು ಪಾಲ್ಗೊಂಡು ಅಡಿಗೆ ಅನಿಲ ಸರಬರಾಜು, ಲಭ್ಯತೆ ಹಾಗೂ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಸಹ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಳ್ಳಿ, ಆಯುಕ್ತ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್ ಸೇರಿದಂತೆ ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕ ಮಂಜುನಾಥ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ರಾಜ್ಯದಲ್ಲಿ ಅಡಿಗೆ ಅನಿಲ ಸರಬರಾಜು ಸುಗಮವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

