ಬೆಂಗಳೂರು: ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಈಗ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಜ್ಯದದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಾಗ್ದಾಳಿ ನಡೆಸಿದರು.ಕಾಟನ್ ಪೇಟೆ ಠಾಣೆ ಇನ್ಸ್‌ಪೆಕ್ಟರ್, ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಶನಿವಾರ ರಾತ್ರಿ ನೈಟ್ ರೌಂಡ್ಸ್ ನಲ್ಲಿದ್ದರು