ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ (cow) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ ಪ್ರಾಣಿಯ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕೌರ್ಯ ಎಸಗುತ್ತಿದ್ದಾರೆ.
ಇದೀಗ ಇಂತಹದ್ದೇ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ.ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿದೆ. ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವರಿಗೆ ಹಸು ಸೇರಿತ್ತು.
ಗುರುಸಿದ್ದಪ್ಪ ಎಂಬುವರರ ಜಮೀನಿನಲ್ಲಿ ಹಸುವಿನ ಮೇಲೆ ಕೌರ್ಯ ಎಸಗಲಾಗಿದ್ದು, ಅವರ ವಿರುದ್ಧ ಹಸುವಿನ ಮಾಲೀಕ ಮರಿಬಸವಯ್ಯ ಆರೋಪ ಮಾಡಿದ್ದಾರೆ. ಈ ಹಿಂದೆ ಡೇರಿ ಅಧ್ಯಕ್ಷ ಚುನಾವಣೆ ವೇಳೆ ಮರಿಬಸವಯ್ಯ ಮತ್ತು ಗುರುಸಿದ್ದಪ್ಪ ನಡುವೆ ವೈಮನಸ್ಸು ಏರ್ಪಟ್ಟಿತು. ಹೀಗಾಗಿ ಗುರುಸಿದ್ದಪ್ಪ ವಿರುದ್ಧ ಹಸುವಿನ ಕೆಚ್ಚಲು ಕೊಯ್ದಿರುವ ಆರೋಪ ಮಾಡಲಾಗಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

