ನೆರೆಯ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲ್ಲೂಕು ರೊಳ್ಳ ಮಂಡಲ್ ಕೊತ್ತಪಾಳ್ಯ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಕೆ.ಟಿ.ಡಿ ಆಸ್ಪತ್ರೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತದನಂತರ ಗ್ರಾಮದ ಚಿಕ್ಕ ತಿರುಪತಿ ಎಂದು ಪ್ರಸಿದ್ಧಿ ಪಡೆದಿರುವ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ.ಜಯಚಂದ್ರ ರವರು.ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಮಾಜಿ ಸಚಿವರು, ಎಐಸಿಸಿ ಸಂಸದೀಯ ಮಂಡಳಿ ಸದಸ್ಯರಾದ ಎನ್.ರಘುವೀರ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


