ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kissan Samman Nidhi) ಕಡತಕ್ಕೆ ಪ್ರಧಾನಿ ಮೋದಿ (PM Narendra Modi) ಸಹಿ ಹಾಕಿದ್ದಾರೆ.
ಭಾನುವಾರವೇ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ. ಇದೀಗ ಅವರು ಇಂದು ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್‌ಗೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಚುರುಕುಗೊಂಡ ಮುಂಗಾರು- ರಾಜ್ಯದ ಹಲವೆಡೆ ರೆಡ್, ಆರೆಂಜ್ ಅಲರ್ಟ್ ಘೋಷಣೆ..!
ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಇದನ್ನೂ ಓದಿ: ಇದು ಬಿಜೆಪಿ ಜೆಡಿಎಸ್ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವು: ಡಿಕೆ ಸುರೇಶ್ ಭಾವುಕ
ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ರಾಹುಲ್, ಖರ್ಗೆ ಭೇಟಿ ಮಾಡಿ ಬೆಂಗಳೂರಿಗೆ ಡಿಕೆಶಿ ವಾಪಸ್

