By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

ರಾಜ್ಯ-KarnatakaLatestರಾಜಕೀಯ | Politics

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

Money from Karnataka for Bihar elections: Minister Ramalinga Reddy slams BJP allegations

Published October 21, 2025
Share
2 Min Read
Ramalinga Reddy
SHARE

ಬೆಂಗಳೂರು: ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ! ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದವಾಗಿದೆ.ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ? ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ದೇಶಕ್ಕೆ ನೀಡಿದ ಕೊಡುಗೆ ಮತ್ತು ಜನಪರ ಕೆಲಸಗಳಿಂದ ಕಾಂಗ್ರೆಸ್ ಪಕ್ಷ ಇಂದಿಗೂ ಸದೃಢವಾಗಿದೆ.

2008-2013 ಮತ್ತು 2019-2023 ರ ಅವಧಿಗಳಲ್ಲಿ ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರವಿತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಚುನಾವಣೆಗಳು ನಡೆದವು. ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ನೀವೆಲ್ಲರೂ ಹಂಚಿ ಕಳುಹಿಸಿದ್ದೀರಾ? ರಾಜ್ಯದ ಜನತೆಯ ಮುಂದೆ ಉತ್ತರಿಸುವ ಧೈರ್ಯ ನಿಮಗಿದೆಯೇ? ಎಂದರು.

ಹಣದ ಹೊಳೆ ಹರಿಸಿ, ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ‘ಆಪರೇಷನ್ ಕಮಲ’ದ ಪಿತಾಮಹರು ನೀವು ಎನ್ನುವುದು ರಾಜ್ಯದ ಮೂಲೆ ಮೂಲೆಯಲ್ಲಿರುವ ಸಾಮಾನ್ಯ ಪ್ರಜೆಗೂ ತಿಳಿದಿದೆ. ಭ್ರಷ್ಟಾಚಾರದ ಗಂಗೋತ್ರಿಯಾದ ನೀವು, ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ಈ ಶತಮಾನದ ಅತಿದೊಡ್ಡ ಜೋಕ್.

ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆಯ ಶಾಸಕರನ್ನು ಕರ್ನಾಟಕ ಎಂದಿಗೂ ಮರೆಯುವುದಿಲ್ಲ. 40% ಸರ್ಕಾರ: ರಾಜ್ಯ ಗುತ್ತಿಗೆದಾರರ ಸಂಘವು ‘40% ಕಮಿಷನ್’ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರು ಮಾಡಿತ್ತು. ಆ ಕಮಿಷನ್ ಹಣ ಯಾವ ಯಾವ ರಾಜ್ಯಗಳಿಗೆ ಹೋಯಿತು ಎಂದು ಜನತೆಗೆ ಈಗಲಾದರೂ ಲೆಕ್ಕ ಕೊಡುವಿರ? ನಮ್ಮ ಸರ್ಕಾರ ‘ಗ್ಯಾರಂಟಿ’ಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿದೆ. ನಿಮ್ಮಂತೆ ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಕಪ್ಪು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ ಎಂದರು.

ವಾಸ್ತವವಾಗಿ, 2019ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಬರೋಬ್ಬರಿ ₹6,060 ಕೋಟಿ ಸಂಗ್ರಹಿಸಿದ್ದು, ಅದರಲ್ಲಿ ಇಡಿ-ಐಟಿ ತನಿಖೆ ಎದುರಿಸುತ್ತಿದ್ದ ಕಂಪನಿಗಳಿಂದಲೇ ₹2746 ಕೋಟಿಗೂ ಹೆಚ್ಚು ದೊಡ್ಡ ಮೊತ್ತದ ದೇಣಿಗೆ ಪಡೆದಿದ್ದೀರಿ. ಈ ಭ್ರಷ್ಟ ಹಣವನ್ನೇ ನೀವು ಬೇರೆ ರಾಜ್ಯಗಳ ಚುನಾವಣೆಗೆ ಬಳಸುತ್ತಿರುವುದು ಅಲ್ಲವೇ? ನೀವು ನಮಗೆ ಪಾಠ ಹೇಳುವ ನೈತಿಕತೆ ಉಳಿಸಿಕೊಂಡಿಲ್ಲ. ಮೊದಲು ನಿಮ್ಮ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ.

You Might Also Like

65 ವರ್ಷದ ಬಿಜೆಡಿ ಮಾಜಿ ಸಂಸದನನ್ನ ಮದುವೆಯಾದ 50ರ ಹರೆಯದ ಮಹುವಾ ಮೋಯಿತ್ರಾ

ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಬೆಳಗಾವಿ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Loka Sabha Election 2024: ತಪ್ಪದೇ ಇಂದು ಮತ ಚಲಾಯಿಸಿ

ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ

TAGGED:Ramalinga Reddy
Share This Article
Facebook Copy Link Print
Previous Article Rain Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
Next Article Pm Modi 1 Pm Modi 1 Pm Modi 1 ಬಿಹಾರ ವಿಧಾನಸಭಾ ಚುನಾವಣೆ : ಅ. 24ರಿಂದ ಪ್ರಚಾರಕ್ಕೆ ಪ್ರಧಾನಿ ಮೋದಿ ಎಂಟ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up