ಬೆಂಗಳೂರು: ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು(Monsoon) ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳುರು ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೀಗ ಜೂನ್ 21 ರ ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಲ್ಳಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಹ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು