ರಾಮನಗರ: ಅವಧಿ ಮುಗಿದ ಐಸ್ ಕ್ರೀಂ (Ice Cream) ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣ (Chennapatna) ಟಿಪ್ಪುನಗರದ ಮಿಲನ್ ಶಾದಿಮಹಲ್‌ನಲ್ಲಿ ನಡೆದಿದೆ.
ಮಿಲನ್ ಶಾದಿಮಹಲ್‌ನಲ್ಲಿ ಭಾನುವಾರ ನಡೆದ ಮದುವೆ (Marriage) ಸಮಾರಂಭವೊಂದರಲ್ಲಿ 80ಕ್ಕೂ ಹೆಚ್ಚು ಮಂದಿ ಐಸ್ ಕ್ರೀಂ ಸೇವಿಸಿದ್ದರು. ಈ ಪೈಕಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಸಂತ್ರರನ್ನು ಚಿಕಿತ್ಸೆಗಾಗಿ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ: ಆರ್. ಅಶೋಕ್
ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಘಟನೆಯಿಂದ ಸ್ಥಳೀಯರು ಗಾಬರಿಗೊಂಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಜೆಪಿ ನಡ್ಡಾ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು