ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಇಡೀ ರಾಜ್ಯದಲ್ಲಿ ಶೇ 29ರಷ್ಟು ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ.
ಕಲಬುರಗಿ ಹಾಗೂ ಬೀದರ್ ಹೊರತಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು ಕರಾವಳಿ ಭಾಗದಲ್ಲಿ ಶೇ 31ರಷ್ಟು ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.
ಬೆಂಗಳೂರಿನಳ್ಳಿ ವಾಡಿಕೆಯಂತೆ ಜುಲೈ 16ಮಿ.ಮೀ ಮಳೆಯಾಗುತ್ತಿರರು, ಆದರೆ ಈ ಬಾರಿ 17 ಮಿ.ಮೀ ಮಳೆಯಾಗಿದ್ದು ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.
ಆಗಸ್ಟ್‌ನಲ್ಲೂ ಉತ್ತಮ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ. ಆಗಸ್ಟ್ 3ರವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದಿದೆ.
ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂದಿನ 24 ಗಂಟೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

