ವಿಜಯಪುರ: ಮಕ್ಕಳಿಲ್ಲವೆಂದು ಎಷ್ಟೋ ಮಂದಿ ಕೊರಗುತ್ತಾರೆ. ಈ ನಡುವೆ ಮಹಿಳೆಯೊಬ್ಬಳು ನವಜಾತ (Just Born Baby) ಗಂಡು ಶಿಶುವನ್ನು ಚರಂಡಿಗೆ (Drainage) ಎಸೆದು ಹೋಗಿರುವ ಹೃದಯವಿದ್ರಾವಕ ಜೆಲ್ಲೆಯ ಮುದ್ದೇಬಿಹಾಳ (Muddebihala) ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆತ್ತ ತಾಯಿಯ ಈ ಕ್ರಮಕ್ಕೆ ಸರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಅಮಿತ್ ಶಾರನ್ನ ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್
ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

