ಬೆಂಗಳೂರು: ಲೈಂಗಿಕ ಆರೋಪ ದೌರ್ಜನ್ಯ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ (Hassan) ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಜೆಡಿಎಸ್ (JDS) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್‌ಡಿ. ಕುಮಾರಸ್ವಮಿ (HD.Kumaraswamy )ಖಚಿತ ಪಡಿಸಿದ್ದಾರೆ.
ಇಂದು ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಪಕ್ಷದಿಂದ ಪ್ರಜ್ವಲ್‌ರನ್ನು ಉಚ್ಚಾಟಿಸಲಾಗಿದೆ. ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗುತ್ತಾ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ನಾವೇ ಹೇಳುತ್ತಿದ್ದೇವಲ್ಲಾ ಸಮಗ್ರ ತನಿಖೇ ಆಗಬೇಕೆಂದು. ಬೆಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧವಿಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ. ನನ್ನ ತಂದೆ ಬಗ್ಗೆ ಸಂಶಯ ಪಡಬೇಡಿ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್
ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ
ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸೋತರೆ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗುತ್ತೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ. ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ಮುಂದುವರಿಯುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ಮೇಲೆ SIಖಿ ತನಿಖೆ ನಡೆಯುತ್ತಿರುವುದರಿಂದ ಜೆಡಿಎಸ್ ಪಕ್ಷವೇ ರಾಜೀನಾಮೆ ನೀಡುವಂತೆ ಸೂಚಿಸುವ ಸಾಧ್ಯತೆ ಇದೆ. ವಿಡಿಯೋ ಪ್ರಕರಣದಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ. ಇದನ್ನೂ ಓದಿ: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

