ಬೆಂಗಳೂರು : ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್ ಮಾಡಿದ್ದು, ಸೆಪ್ಟೆಂಬರ್ 11ಕ್ಕೆ ವಿಚಾರಣೆ ನಡೆಯಲಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸೆಂಥಿಲ್, ಬುರುಡೆ ಕೇಸ್‌ನಲ್ಲಿ ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ ಎಂದು ಹೇಳಿದ್ದಾರೆ.
ಈ ಹ್ಯಾಂಗಲ್‌ನಲ್ಲಿ ಯಾರು ಸ್ಟೋರಿ ತಗೊಂಡು ಬಿಲ್ಡ್ ಮಾಡ್ತಿದ್ದಾರೆ ಅವರನ್ನು ಕೂಡ ತಗೊಳ್ತಿನಿ. ಈ ಕೇಸಲ್ಲಿ ನನ್ನ ಹೆಸರು ಯಾಕೆ ಬಂತು, ಗೊತ್ತಿಲ್ಲ. ನನ್ನ ಹೆಸರನ್ನ ತಮಿಳುನಾಡಿನ ಮಾಜಿ ಪೊಲೀಸ್ ಅಧಿಕಾರಿ ಅಲ್ಲಿ ತಗೊಂಡಿದ್ದಾರೆ. ಇದು ಹೀಗೆ ಬಿಟ್ಟರೆ, ಒಂದು ಸ್ಟೋರಿ ಕ್ರಿಯೇಟ್ ಆಗುತ್ತೆ. ನಾನು ಲೀಗಲ್ ಸಿಸ್ಟಮ್‌ನಲ್ಲಿ ಹೋಗ್ತೀದ್ದೀನಿ. ಸತ್ಯ ಏನಿದೆ ತನಿಖೆಯಿಂದ ಹೊರ ಬರಲಿ ಎಂದು ಒತ್ತಾಯಿಸಿದ್ದಾರೆ.
ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.

