ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈಗೆ 14 ಶಸ್ತ್ರಸಜ್ಜಿತ ಭಯೋತ್ಪಾದಕರು 400 ಕೆ.ಜಿ. ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಪ್ರವೇಶಿಸಿದ್ದಾರೆ ಎಂಬ ವಾಟ್ಸ್ ಆ್ಯಪ್ ಸಂದೇಶವನ್ನು ಆಧರಿಸಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಗಣೇಶ ಚತುರ್ಥಿ ಕಳೆದು 10 ದಿನಗಳ ನಂತರ ಆಚರಿಸುವ ಅನಂತ ಚತುರ್ಥಿಗೆ ಭದ್ರತೆ ಒದಗಿಸಲು ಪೊಲೀಸರು ಸಾಕಷ್ಟು ಸಿದ್ಧತೆ ನಡೆದಿದೆ. ಇದೇ ಸಂದರ್ಭದಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಯ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್ ಸಂದೇಶ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಒಟ್ಟು 34 ವಾಹನಗಳಲ್ಲಿ 400 ಕೆ.ಜಿ. ಆರ್‌ಡಿಎಕ್ಸ್ ತುಂಬಿ ಕಳುಹಿಸಲಾಗಿದೆ. ಇದರೊಂದಿಗೆ 14 ಭಯೋತ್ಪಾದಕರು ಮುಂಬೈ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಆ ಸಂದೇಶದಲ್ಲಿದೆ. ಸಂದೇಶದಲ್ಲಿ ‘ಲಷ್ಕರ್ ಎ ಜಿಹಾದಿ’ ಎಂಬ ಸಂಘಟನೆಯ ಹೆಸರಿದೆ. ಈ ಕುರಿತು ಅಪರಾಧ ವಿಭಾಗ ತನಿಖೆ ಆರಂಭಿಸಿದೆ. ಭಯೋತ್ಪಾದನಾ ನಿಗ್ರಹ ದಳ ಮತ್ತು ಇತರ ಭದ್ರತಾ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ’ ಎಂದಿದ್ದಾರೆ.
‘ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜತೆಗೆ ಮುಂಬೈನ ವಿವಿಧೆಡೆ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸಂದೇಶ ಬಂದ ಸಂಖ್ಯೆಯ ಮೂಲವನ್ನೂ ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇಂಥ ಯಾವುದೇ ವದಂತಿಗೆ ಕಿವಿಗೊಡದಂತೆ ಮುಂಬೈನ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

