ನವದೆಹಲಿ: ಚಿತ್ರದುರ್ಗದ (Chitradurga) ಮುರುಘಾ ಶ್ರೀ (Murugha Sri) ಮತ್ತೆ ಜೈಲು ಪಾಲಾಗಿದ್ದಾರೆ, ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನು 4 ತಿಂಗಳಿಗೆ ವಿಸ್ತರಿಸಿದ್ದು, ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ.
ಚಿತ್ರದುರ್ಗದ ಮುರುಘಾ ಶ್ರೀ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಬಳಿಕ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಢಿದ್ದ ಜಾಮಿನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುಬವಂತೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ
ನಾಲ್ಕು ತಿಂಗಳಲ್ಲಿ ಪ್ರಕರಣ ಸಂಬಂಧ ತನಿಖೇ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಇನ್ನೆರೆಡು ತಿಂಗಳು ಹೆಚ್ಚುವರಿಗೆ ನ್ಯಾಯಾಂಗ ಬಂಧನ ನೀಡುವ ಸಾಧ್ಯತೆಗಳು ಕೂಡ ಇದೆ, ಇತ್ತ ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಪೂಜಾ ರಮೇಶ್ ಬಿಜೆಪಿಗೆ ಸೇರ್ಪಡೆ

