ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ (Tamil) ಯುವ ಸಂಗೀತ ನಿರ್ದೇಶಕ (Music Director) ಪ್ರವೀಣ್ ಕುಮಾರ್ (Praveen Kumar) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಅವರ ಅಭಿಮಾನಿಗಳು ಮತ್ತು ಚಿತ್ರೋದ್ಯಮ ಕಂಬನಿ ಮಿಡಿದೆ.