ಮೈಸೂರು ಅರಮನೆ ದೀಪಾಲಂಕಾರ 12 ದಿನಗಳ ವರೆಗೆ ವಿಸ್ತರಣೆ

ಬೆಂಗಳೂರು : ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್‌ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್‌ಗಳ ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು. ಜನರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡಿ ದೀಪಾಲಂಕಾರ ಕಣ್ತುಂಬಿಕೊಳ್ಳುವಂತೆ ಡಿಸಿಎಂ ಡಿಕೆಶಿ ಕರೆ ನೀಡಿದ್ದಾರೆ. … Continue reading ಮೈಸೂರು ಅರಮನೆ ದೀಪಾಲಂಕಾರ 12 ದಿನಗಳ ವರೆಗೆ ವಿಸ್ತರಣೆ