ಮೈಸೂರು: ವಿಷಾನಿಲ ಸೋರಿಕೆಯಿಂದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ಮೈಸೂರಿನ (Mysuru) ಹಳೆ ಕೆಸರೆಯ ಗುಜರಿಯಲ್ಲಿ ನಡೆದಿದೆ.
ಗುಜರಿಯ ಗೋಡೌನ್‍ನಲ್ಲಿ (Gujari gowdon) ವಿಷಕಾರಿ ಅನಿಲ್ ಸೋರಿಕೆಯಾಗಿದ್ದು, ಸುತ್ತಮುತ್ತಲ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಗುಜರಿಯಲ್ಲಿ ಕೆಲಸ ಮಾಡುತ್ತಿದ್ದ ಐವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.