ನವದೆಹಲಿ: ನರೇಂದ್ರ ಮೋದಿಯವರು (Narendra Modi) ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಇಂದು ಮೋದಿ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದನ್ನೂ ಓದಿ: ವಿಷ ಸೇವಿಸಿ ದಂಪತಿ ಆತ್ಮಹತ್ಯೆ
ಜೊತೆಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿತೀಶ್, ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ- ಜೆಡಿಯು ಸ್ಪಷ್ಟನೆ
ಎನ್‍ಡಿಎ 292 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದು, ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ನಡೆಸುವುದು ಖಚಿತವಾಗಿದೆ. ಆದರೆ ಬಿಜೆಪಿ ಗೆದ್ದರೂ ಮಿತ್ರ ಪಕ್ಷಗಳ ಬೆಂಬಲದಿಂದ ಬಹುಮತ ಸಾಬೀತು ಪಡಿಸಬೇಕಿದೆ. ಈ ಮೂಲಕ 10 ವರ್ಷಗಳ ನಂತರ ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್ 8 ಸಂಜೆ ಪ್ರಮಾಣವಚನ

