ಬೆಂಗಳೂರು: ಲೋಖಸಭಾ ಚುನಾವಣೆ (Lokasabha Elections) ಹಿನ್ನೆಲೆ ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಜೊತೆ ನರೇಂದ್ರ ಮೋದಿ (Narendra Modi) ವೇದಿಕೆ ಹಂಚಿಕೊಂಡಿದ್ದರು. ಇದೀಗ ಅವರು ಮತ್ತೆ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೂಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ. ಕಳೆದ ಭಾನುವಾರ ಪ್ರಧಾನಿ ಮೋಧಿ ಅವರು ಕರ್ನಾಟಕಕ್ಕೆ ಆಗಮಿಸಿ ಮೈಸೂರಿನಲ್ಲಿ ಸಮಾವೇಶದಲ್ಲಿ ಭಾಗಿಯಾಗಿದ್ದರು, ನಂತರ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದನ್ನೂ ಓದಿ: ಭಾರತದಿಂದ ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ದೇಶದ ಬಂದರು ನಿರ್ಬಂಧ
ಇದೀಗ ಅವರು ಒಂದೇ ದಿನ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ವರು ಭಾಗವಹಿಸಲಿದ್ದರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತ ಯಾಚನೆ ಮಾಲಿದ್ದಾರೆ. ನಂತರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಅರಮನೆ ಮೈದಾನದಲ್ಲಿ ಸಂಜೆ 67 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್

