ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಧಾನ ಪರಿಷತ್ ಸದಸ್ಯ (MLC) ನಸೀರ್ ಅಹಮದ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತೀವ್ರ ಕೌಂಟರ್ ನೀಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ದೇಶದ್ರೋಹಿ ಎಂದು ನಸೀರ್ ಅಹಮದ್ ಆರೋಪಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಮೋದಿ ದೇಶ ಗೌರವಿಸುವ ಹಾಗೂ ಜಗತ್ತು ಗೌರವಿಸುವ ಪ್ರಧಾನಮಂತ್ರಿ ಎಂದು ಹೇಳಿದರು. ಪ್ರಧಾನಿ ಮೋದಿಗೆ ವಿಶ್ವದ 16ಕ್ಕೂ ಹೆಚ್ಚು ದೇಶಗಳಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಸಂದಿವೆ ಎಂದು ಅವರು ಉಲ್ಲೇಖಿಸಿದರು.
ದೇಶದ್ರೋಹಿ ಚಟುವಟಿಕೆಗಳನ್ನು ಕಟ್ಟಿಹಾಕುವಲ್ಲಿ ಮೋದಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ನಕ್ಸಲಿಸಂ ಹಾಗೂ ಭಯೋತ್ಪಾದನೆ ವಿರುದ್ಧ ಜೀರೋ ಟಾಲರೆನ್ಸ್ ನೀತಿಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಿ.ಟಿ ರವಿ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ರಾಷ್ಟ್ರದ ಭದ್ರತೆ ಮತ್ತು ಗೌರವ ಕಾಪಾಡುವಲ್ಲಿ ಮೋದಿ ಸರ್ಕಾರದ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

