ಕೋಲಾರ : ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ಜಿಲ್ಲಾ ಉಸ್ತುವಾರಿಗಳಾದ ಶ್ರೀ ಗುಣಶೇಖರ್ ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ನಾರಾಯಣಸ್ವಾಮಿ ಅವರುಗಳು ನಡೆಸಿಕೊಟ್ಟರು.
ಈ ವೇಳೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (SP) ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾದ ಶ್ರೀ ಪ್ರಕಾಶ್ ಮೋರೆ, ಉಸ್ತುವಾರಿಗಳಾದ ಶ್ರೀ ಪ್ರಸನ್ನ, ಪ್ರಧಾನಲಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್, ಕೆಜಿಎಫ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ವೆಂಕಟಸ್ವಾಮಿ ಅವರು ಹಾಜರಿದ್ದರು.