ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ (Lok Sabha Election Result) ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ (New Delhi) ಎನ್‌ಡಿಎ (NDA) ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ನ್‌ಡಿಎಗೆ ಬಿಗ್ ಶಾಕ್ ಉಂಟಾಗಿದೆ,. ಯಾರು ಉಹಿಸದಂತಹ ಫಲಿತಾಂಶ ಬಂದಿದೆ. ಸದ್ಯ ಇಂದು ದೆಹಲಿಯಲ್ಲಿ ನಡೆಯುವ ಸಭೆಗೆ ಎಲ್ಲಾ ಮೈತ್ರಿ ನಾಯಕರನ್ನು ಆಹ್ವಾನಿಸಲಾಗಿದೆ. ಅಲ್ಲದೇ ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಯ ವೇಳೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರ ರಚನೆ, ಮುಂದಿನ ರಣತಂತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಕೇರಳದಲ್ಲಿ ಸುರೇಶ್ ಗೋಪಿಗೆ ಜಯ- ಬಿಜೆಪಿಗೆ ಮೊದಲ ಜಯ
ಇಂದಿನಿಂದ ಜೂ.9ರವರೆಗೆ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಸರ್ಕ್ಯೂಟ್-1ಕ್ಕೆ ಪ್ರವೇಶ ನಿರ್ಬಂಧಿಸಿರುವುದಾಗಿ ರಾಷ್ಟ್ರತಿ ಭವನ ತಿಳಿಸಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಿದ್ಧತೆಯ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂ.9ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಜಯದ ಮಾಲೆ

