ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆಯಷ್ಟೇ( ಮಂಗಳವಾರ) ಬಂದಿದೆ. ಇದೀಗ ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದಲ್ಲಿ ಮೊದಲ ರ‍್ಯಾಂಕ್ ಪಡೆದ ಟಾಪ್ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ 6 ಮಂದಿ ಇದ್ದಾರೆ.
ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್,ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ನೀಟ್ ಟಾಪರ್ಸ್ ಆಗಿದ್ದಾರೆ. ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಕರ್ನಾಟಕ ಹಿರಿಮೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ
ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಟ್ ಪರೀಕ್ಷೆ ನಡೆಯುತ್ತದೆ. 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ಪರೀಕ್ಷೆ ನಡೆದಿತ್ತು. ಒಟ್ಟು 24,06,079 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಆದರೆ ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಇದ್ದರು. ಇದನ್ನೂ ಓದಿ: ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ