ಕಿರುತರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ನೇಹಾ (Neha Gowda) ದೊಡ್ಡ ಹೆಸರು ಮಾಡಿದ್ದಾರೆ. ನಟಿಯಾಗಿ, ಮಾಡೆಲ್ ಆಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರು ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ.
2018 ರಲ್ಲಿ ತಮ್ಮ ಬಾಲ್ಯದ ಸ್ನೇಹಿತ ಚಂದನ್ ಗೌಡ (Chanadan Gowda) ಅವರನ್ನ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲೀಟ್ಟರು. ಆರು ವರ್ಷಗಳ ಬಳಿಕ ಇವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ. ಈಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ನೇಹಾ ತಾಯಿಯುಗುತ್ತಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ.

ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿರೋ ನೇಹಾ ‘ನಮ್ಮ ಕುಟುಂಬ ಬೆಳೆಯುತ್ತಿದೆ’ ಎಂದು ಹೇಳಿಕೊಂಡಿದ್ದಾರೆ. ಇಬ್ಬರು ಮೂವರಾಗುತ್ತಿದ್ದೀವಿ ಎಂದು ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ನೇಹಾ ಗೌಡ ಅವರು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಗೊಂಬೆ ಪಾತ್ರ ಮಾಡಿದ್ದರು. ನೇಹಾ ಹಾಗೂ ಚಂದನ್ ಅವರು ಹಲವು ರಿಯಾಲಿಟಿ ಶೋಗಳಿಗೆ ಒಟ್ಟಾಗಿ ತೆರಳಿದ್ದಾರೆ.

