ಮದುವೆಯಾದ ಮರುದಿನವೇ ಮಾರಾಮಾರಿ : ವಧು-ವರ ಇಬ್ಬರೂ ಸಾವು

ಕೋಲಾರ: ಕೋಲಾರದಲ್ಲಿ ಪರಸ್ಪರ ಪ್ರೀತಿಸಿ ನಿನ್ನೆ ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಳು. ಇಂದು ಚಿಕಿತ್ಸೆ ಫಲಕಾರಿಯಾಗದೇ ವರನೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ (20) ಬುಧವಾರ ಕೋಲಾರದಲ್ಲಿ ಮೃತಪಟ್ಟಿದ್ದಳು. ಚಂಬರಸನಹಳ್ಳಿಯ ನವೀನ್ (28) ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ದಾಖಲಾಗಿದ್ದ ನವೀನ್‌ ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು. … Continue reading ಮದುವೆಯಾದ ಮರುದಿನವೇ ಮಾರಾಮಾರಿ : ವಧು-ವರ ಇಬ್ಬರೂ ಸಾವು