ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೆಂಗಳೂರಿನ (Bengaluru) ಗಂಗಮ್ಮನ ಗುಡಿಯಲ್ಲಿ ನಡೆದಿದೆ.
ಪೂಜಾ(22) ಆತ್ಮಹತ್ಯೆ (Dowry) ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಇದನ್ನೂ ಓದಿ: UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ
ಮದುವೆ ಬಳಿಕ ಮೈದುನ ಅನಿಲ್ ಕೂಡ ಅವರೊಂದಿಗೆ ಇರುತ್ತಿದ್ದ. ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಸದ್ಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಾ ಅವರ ವೇತನವನ್ನು ಸಹ ಮೈದುನ ಬಲವಂತವಾಗಿ ತೆಗೆದುಕೊಳ್ಳುತ್ತಿದ್ದ.
ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್ ರೈತರಿಗೆ ಶಾಕ್
ಪೂಜಾ ಆತ್ಮಹತ್ಯೆ ಸಂಬಂಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಎಸ್ ಎನ್. ನಾರಾಯಣಸ್ವಾಮಿ ರವರು 15 ಕೋಟಿ ರೂಗಳ ವೆಚ್ಚದಲ್ಲಿ ಶಂಕುಸ್ಥಾಪನೆ