CRPF personnel Arrest : ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಕೇಂದ್ರ ಮೀಸಲು ಪಡೆ ಸಿಬ್ಬಂದಿಯೊಬ್ಬರನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನ ಮೋತಿ ರಾಮ್ ಜಾಟ್ ಎಂದು ಗುರುತಿಸಲಾಗಿದೆ.
ಬಂಧಿಸಲ್ಪಟ್ಟ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಪಹಲ್ಗಾಮ್‌ನಲ್ಲಿ 26 ಮಂದಿಯ ನರಮೇಧ ನಡೆಯುವುದಕ್ಕೆ 6 ದಿನಗಳ ಮುಂಚೆ ಅವರನ್ನ ಅಲ್ಲಿಗೆ ವರ್ಗಾತಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.
ಸಿಆರ್‌ಪಿಎಫ್‌ನ 116ನೇ ಬೆಟಾಲಿಯನ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಮೋತಿ ರಾಮ್ ಜಾಟ್‌ರನ್ನ ಕಳೆದ ಏಪ್ರಿಲ್ 22 ರಂದು ಹಿಂದೂಗಳ ನರಮೇಧ ನಡೆಯುವುದಕ್ಕೆ 6 ದಿನಗಳ ಹಿಂದೆ ಪಹಲ್ಗಾಮ್‌ಗೆ ವರ್ಗಾವಣೆ ಮಾಡಲಾಗಿತ್ತು.
ಈತ 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ. ಅದಕ್ಕಾಗಿ ಪಾಕಿಸ್ತಾನಿ ಅಧಿಕಾರಿಗಳಿಂದ ಬಹು ಮಾರ್ಗಗಳ ಮೂಲಕ ಹಣ ಪಡೆಯುತ್ತಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

