ಮುಂಬೈ: ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದ ಹದಿನೇಳು ವರ್ಷಗಳ ನಂತರ, ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಿಸಿದೆ. ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಮತ್ತು ಇತರರು ಸೇರಿದಂತೆ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು ಎನ್ಐಎ ನ್ಯಾಯಾಲಯವು ಖುಲಾಸೆಗೊಳಿಸಿದೆ.
2008ರ ಸೆಪ್ಟೆಂಬರ್ 29ರಂದು, ನಾಸಿಕ್‌ನ ಮಾಲೆಗಾಂವ್ ನಗರದ ಮಸೀದಿಯೊಂದರ ಬಳಿ ಮೋಟಾರ್‌ಸೈಕಲ್‌ಗೆ ಕಟ್ಟಿದ್ದ ಸ್ಫೋಟಕ ಸಾಧನವು ಸ್ಫೋಟಗೊಂಡಾಗ ಆರು ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ.
2008ರಲ್ಲಿ ನಾಸಿಕ್‌ನ ಮಾಲೆಗಾಂವ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಸ್ಫೋಟ ಸಂಭವಿಸಿದೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸಿದರೂ, ಮೋಟಾರ್‌ಸೈಕಲ್‌ನಲ್ಲಿ ಬಾಂಬ್ ಇರಿಸಲಾಗಿತ್ತು ಎಂಬುದನ್ನು ಸಾಬೀತುಪಡಿಸಲು ವಿಫಲವಾಯಿತು.
ಮಹಾರಾಷ್ಟ್ರದ ಕೋಮು ಸೂಕ್ಷ್ಮ ಪಟ್ಟಣವಾದ ಮಾಲೆಗಾಂವ್‌ನಲ್ಲಿ ಸೆಪ್ಟೆಂಬರ್ 29, 2008 ರಂದು, ಪವಿತ್ರ ರಂಜಾನ್ ಮಾಸದಲ್ಲಿ ಮತ್ತು ನವರಾತ್ರಿಗೆ ಸ್ವಲ್ಪ ಮೊದಲು ಈ ಸ್ಫೋಟ ಸಂಭವಿಸಿತು. ಈ ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಆರೋಪಿಗಳನ್ನು ಎಲ್ಲಾ ಆರೋಪಗಳಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸ್ಫೋಟದ ಆರು ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡ ಎಲ್ಲಾ ಬಲಿಪಶುಗಳಿಗೆ 50,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಲಯ ತಿಳಿಸಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

