ಮುಂಬೈ: ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಅವರ ತಾಯಿ ನಿರ್ಮಲ್ ಕಪೂರ್ ಅವರು 90 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಕಳೆದ ಒಂದು ವಾರದಿಂದ ಅವರನ್ನು ಮುಂಬೈನ ಕೊಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು (2) ಮೃತಪಟ್ಟಿದ್ದಾರೆ.
ಅನಿಲ್ ಕಪೂರ್, ಬೋನಿ ಕಪೂರ್ ಮತ್ತು ಸಂಜಯ್ ಕಪೂರ್ ಅವರ ತಾಯಿ ನಿರ್ಮಲ್ ಕಪೂರ್ ನಿಧನರಾಗಿದ್ದು, ಈ ಹಠಾತ್ ಸುದ್ದಿ ಈ ಮೂವರಿಗೆ ಮಾತ್ರವಲ್ಲದೆ ಅವರ ಅಭಿಮಾನಿಗಳಿಗೂ ಆಘಾತವನ್ನುಂಟು ಮಾಡಿದೆ.

