Bihar: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಎನ್ ಡಿಎ ನಾಯಕರು ಸಮಾರಂಭಕ್ಕೆ ಹಾಜರಾಗುವ ಸಾಧ್ಯತೆ ನಿರೀಕ್ಷೆ ಇದೆ.
10 ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ದರಾಗಿರುವ ಜೆಡಿ (ಯು) ನಾಯಕ ನಿತೀಶ್ ಕುಮಾರ್ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.
ಬಿಜೆಪಿ-ಜೆಡಿ (ಯು) ಮೈತ್ರಿಕೂಟದ ಸರ್ಕಾರ ರಚನೆ ಯಾವ ರೀತಿ ಇರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ನಿತೀಶ್ ಕುಮಾರ್ ಅವರ ಜೆಡಿಯು ಸಿಎಂ ಹುದ್ದೆಯನ್ನು ಪಡೆಯಬಹುದು. ಆದರೆ ಬಿಜೆಪಿ ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ತಲಾ ಒಂದು ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಬಹುದು.ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ.
ಬಿಹಾರ ವಿಧಾಸಭಾ ಚುನಾವಣೆಯಲ್ಲಿ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕ್ರಮವಾಗಿ 89 ಮತ್ತು 85 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಟಿಕೆಟ್ ಹಂಚಿಕೆಯ ಸಮಯದಲ್ಲಿ ಪ್ರತಿ ಸಂಸದರಿಗೆ, ಎನ್‌ಡಿಎ ಪಾಲುದಾರರು ಐದು-ಆರು ವಿಧಾನಸಭಾ ಸ್ಥಾನಗಳನ್ನು ಗಳಿಸಿರುವಂತೆ ಕ್ಯಾಬಿನೆಟ್ ಸ್ಥಾನಗಳಿಗೂ ಇದೇ ನಿಯಮ ಜಾರಿಯಾಗಬಹುದು. ಹೊಸ ಸರ್ಕಾರ ಸಮಾನವಾಗಿ ಅಧಿಕಾರ ಹಂಚುವಲ್ಲಿ ಹೆಚ್ಚಿನ ಗಮನ ಹರಿಸಲಿದೆ. ಎನ್‌ಡಿಎ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಿದ್ದು, ಇದರಲ್ಲಿ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಕೆ
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲರನ್ನ ಭೇಟಿಯಾದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟ ಭರ್ಜರಿ ಜಯಗಳಿಸಿದ ನಂತರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದರು.
ನಿರ್ಗಮಿತ ಸಚಿವ ಸಂಪುಟ ಸಭೆ ಸೇರಿ ಸರ್ಕಾರ ರಚನೆಗೆ ಅಗತ್ಯ ಕ್ರಮ”ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿದ ಒಂದು ದಿನದ ನಂತರ ನಿತೀಶ್ ಕುಮಾರ್ ಈ ಕ್ರಮ ಕೈಗೊಂಡಿದ್ದಾರೆ.

