Flood: ಭಾರೀ ಮಳೆಯಿಂದಾಗಿ ಈಶಾನ್ಯ ಭಾಗದಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿದೆ. 2 ದಿನಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಅಸ್ಸಾಂನಲ್ಲಿ 8 ಮಂದಿ, ಅರುಣಾಚಲ ಪ್ರದೇಶದಲ್ಲಿ 9 ಮಂದಿ ಸೇರಿ ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಅಸ್ಸಾಂನ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 12 ಜಿಲ್ಲೆಗಳು ಪ್ರವಾಹ ಹಾಗೂ ಭೂಕುಸಿತದಿಂದ ನಷ್ಟ ಅನುಭವಿಸಿದೆ.
ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ- 13ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.
ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ರಸ್ತೆಗಳು ಹಾನಿಗೊಂಡಿವೆ. ಮೇಘಾಲಯ ಹಾಗೂ ಅಸ್ಸಾಂನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ-17ರ ತುರಾ ಮತ್ತು ಗುವಾಹಟಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಹಲವಾರು ಟ್ರಕ್‌ಗಳು ಮತ್ತು ಘನ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.
ಕ್ಕಿಂನಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಗಳ ಮೇಲೆ ಭೂಕುಸಿತವಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ 1500ಕ್ಕೂ ಅಧೀಕ ಪ್ರವಾಸಿಗರು ಸಿಲುಕೊಂಡಿದ್ದಾರೆ.ಅಲ್ಲದೆ, ತೀಸ್ತಾ ನದಿ ಉಕ್ಕಿ ಹರಿಯುತ್ತಿರುವುದರಿಂದ 8 ನಾಪತ್ತೆಯಾಗಿದ್ದಾರೆ ಎಂದು ಭಾನುವಾರ ವರದಿಯಾಗಿದೆ.

