ನವದೆಹಲಿ : ಕೋವಿಡ್ 19 ಸೋಂಕು ಮತ್ತೆ ದೇಶದಲ್ಲಿ ಹರಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1 ಸಾವಿರಕ್ಕೆ ತಲುಪಿದೆ. ರಾಜ್ಯಗಳ ಪ್ರಮಾಣ ವಾರು ಪಟ್ಟಿ ಇಲ್ಲಿದೆ.
ಕೇರಳ (430) ಇಡೀ ದೇಶದಲ್ಲಿ ಮೊದಲ ಸ್ಥಾನ ಪಡೆದಿದ್ದು, ಮಹಾರಾಷ್ಟ್ರ (209) ನಂತರದ ಸ್ಥಾನದಲ್ಲಿದೆ. ಮಿಕ್ಕಂತೆ ರಾಜಧಾನಿ ದೆಹಲಿ( 104) ಗುಜರಾತ್ (83) ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದಿದೆ. ತಮಿಳುನಾಡು (69) ಐದನೇ ಸ್ಥಾನದಲ್ಲಿದೆ.
ಕರ್ನಾಟಕದಲ್ಲಿ ಸಧ್ಯಕ್ಕೆ 47 ಪ್ರಕರಣಗಳು ಪತ್ತೆಯಾಗಿದ್ದು ದೇಶದಲ್ಲಿಯೇ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಆರನೇ ಸ್ಥಾನ ಪಡೆದಿದೆ. ಇನ್ನುಳಿದಂತೆ ಉತ್ತರಪ್ರದೇಶದಲ್ಲಿ 15 ಪ್ರಕರಣಗಳು, ರಾಜಸ್ಥಾನದಲ್ಲಿ 13 ಪ್ರಕರಣಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 12 ಪ್ರಕರಣಗಳು ಪತ್ತೆಯಾಗಿದೆ.
`ಕೋವಿಡ್ ಬೆಡ್’ಮೀಸಲಿಡಲು ಸರ್ಕಾರ ಆದೇಶ
ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ರದ್ದು :
ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು.

