ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಶಾಸಕ ಹೆಚ್ಡಿ ರೇವಣ್ಣರನ್ನು (Revanna) ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ ಗೃಹ ಸಚಿವ ಜಿ.ಪರಮೇಶ್ವರ್ (G. Parameshwar) ಉತ್ತರ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ನೋಟಿಸ್
ಅಪರಾಧ ದಂಡಸಂಹಿತೆಯ ಸೆಕ್ಷನ್ (41)ಚಿ ಅಡಿ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದರು. ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ
ಎಸ್ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವನ್ನು ಎಸ್ಐಟಿ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ