ತುಮಕೂರು : ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.
ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಜಡ್ಜ್ ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್ಪಿ ಆಕೆಯನ್ನ ಪುಸಲಾಯಿಸಿ ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಯಾವಾಗ ತಮ್ಮ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಮಾಡಿದರೋ ಡಿವೈಎಸ್ಪಿ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಜಿ ಆ್ಯಂಡ್ ಐಜಿಪಿ ಅಲೋಕ್ ಮೋಹನ್ ಡಿವೈಎಸ್ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು.

