ಕಾರವಾರ: ರಾಜ್ಯದ ಎರಡನೆ ಹಂತದ ಮತದಾನಕ್ಕೂ ಮುನ್ನ ಏಪ್ರಿಲ್ 28 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉತ್ತರ ಕರ್ನಾಟಕದ (Uttar Karnataka) ಜೆಲ್ಲೆಗಳಲ್ಲಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆಗೆ (Lokasabha Election) ಕರ್ನಾಟಕದ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲ್ಲಿದ್ದು, ಉಳಿದ 14 ಕ್ಷೇತ್ರಗಳಿಗೆಮೆ 7 ರಂದು ಮತದಾನ. ಹೀಗಾಗಿ ಅವರು ಶಿರಸಿಗೆ ಭೇಟಿ ನೀಡುತ್ತಿದ್ದಾರೆ.
ಶಿರಸಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸದ್ಯ ಲೊಕಸ ಬಆ ಚುನಾವಣೇಗೆ ಟಿಕೆಟ್ ಸಿಗದೆ ಮೌನವಹಿಸಿರುವ ಉತ್ತರ ಕನ್ನಡ ಜೆಲ್ಲೆಯ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ (Anath Kumar Hegde) ಅವರ ಮನೆ ಸಮೀಪದ ಮೈದಾನದಲ್ಲೇ ಮೋದಿ ಸಮಾವೇಶ ನಡೆಯಲಿರುವುದು ಕುತೂಲ ಮೂಡಿಸಿದೆ. ಇದನ್ನೂ ಓದಿ: ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು
ಪ್ರಧಾನಿ ಮೋದಿ ಶಿರಸಿಗೆ ಬರುವುದು ಖಚಿತವಾಗುತ್ತಿದ್ದಂತೆಯೇ ಅನಂತಕುಮಾರ್ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ. ಈ ಹಿಂದೆ ಅಂಕೊಲಾಗೆ ಮೋದಿ ಬಂದಿದ್ದಾಗ ಅನಾರೋಗ್ಯದ ಕಾರಣ ಹೇಳಿ ಅನಂತಕುಮಾರ್ ಹೆಗಡೆ ಸ್ವಾಗತಕ್ಕೆ ಬಂದಿರಲಿಲ್ಲ. ಇದೀಗ ಅನಂತಕುಮಾರ್ ಹೆಗಡೆ ಮನೆಯಿಂದ ಕೆಲವೇ ಮೀಟರ್ಗಳ ದೂರದಲ್ಲಿರುವ ಮೈದಾನದಲ್ಲಿ ಮೋದಿ ಸಮಾವೇಶ ನಡೆಯಲಿದೆ. ಇದಕ್ಕೆ ಹೆಗಡೆ ಬರುತ್ತಾರಾ ಎಂಬ ಕುತೂಹಲ ಮೂಡಿದೆ. ಇದನ್ನೂ ಓದಿ: ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ
ಟಿಕೆಟ್ ಕೈತಪ್ಪಿದ ಕಾರಣ ಅನಂತಕುಮಾರ್ ಹೆಗಡೆ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ಮಾಡುತ್ತಿಲ್ಲ. ಅಷ್ಟೇ ಅಲ್ಲದೆ, ಯಾರ ಕೈಗೂ ಸಿಗುತ್ತಿಲ್ಲ. ಮುನಿಸು ತಣ್ಣಗಾಗಿಸಲು ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದರೂ ಅನಂತಕುಮಾರ್ ಹೆಗಡೆ ಕರೆ ಸ್ವೀಕರಿಸಿರಲಿಲ್ಲ. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು
ಹಾಲಿ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಮೋದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈ ಹಿಂದೆ, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಅನಂತಕುಮಾರ್ ಬರುತ್ತಾರೆ ಎಂದೂ ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎಂಬುದು ಗಮನಾರ್ಹ. ಇದನ್ನೂ ಓದಿ: ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು

