ಬೆಂಗಳೂರು : ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನಲೆ ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ನಡೆಸಲಾಯಿತು.
ಪಾಕ್ ವಿರುದ್ಧ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕ್ ನ 9 ಉಗ್ರರ ಅಡಗುತಾಣವನ್ನು ಹೊಡೆದುರುಳಿಸಿತ್ತು. ಈ ಹಿನ್ನಲೆ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು.
ಅದರಂತೆ ಮೈಸೂರಿನ ಚಾಮುಂಡೇಶ್ವರಿ ದೇವಿ, ನಂಜನಗೂಡಿನ ನಂಜುಂಡೇಶ್ವರ, ಬೆಂಗಳೂರಿನ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅದರಂತೆ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೈನಿಕರ ಒಳಿತಿಗಾಗಿ ವಿಶೇಷ ಹೋಮ ನಡೆಸಲಾಯಿತು.

