By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಹಲ್​ಗಾಮ್ ದಾಳಿಯ ಉಗ್ರರನ್ನು ಹುಡುಕಿ ಕಲ್ಪನೆಗೂ ಮೀರಿದ ಶಿಕ್ಷೆ ನೀಡುತ್ತೇವೆ : ಮೋದಿ ವಾರ್ನಿಂಗ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪಹಲ್​ಗಾಮ್ ದಾಳಿಯ ಉಗ್ರರನ್ನು ಹುಡುಕಿ ಕಲ್ಪನೆಗೂ ಮೀರಿದ ಶಿಕ್ಷೆ ನೀಡುತ್ತೇವೆ : ಮೋದಿ ವಾರ್ನಿಂಗ್
Blogರಾಷ್ಟ್ರೀಯ-National

ಪಹಲ್​ಗಾಮ್ ದಾಳಿಯ ಉಗ್ರರನ್ನು ಹುಡುಕಿ ಕಲ್ಪನೆಗೂ ಮೀರಿದ ಶಿಕ್ಷೆ ನೀಡುತ್ತೇವೆ : ಮೋದಿ ವಾರ್ನಿಂಗ್

Pahalgam Terror Attack Updates: "Will Pursue Accused To Ends Of The Earth,” Says PM Modi

Published April 24, 2025
Share
2 Min Read
SHARE

ಬಿಹಾರ: ‘ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ’ ಎಂದು ಪ್ರಧಾನಿ ಮೋದಿ ಉಗ್ರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಭಯೋತ್ಪಾದಕರನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ನಮ್ಮ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ನಮ್ಮೊಂದಿಗೆ ನಿಂತಿರುವ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ನಾನು ಈ ಸಮಯದಲ್ಲಿ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.

ಪಹಲ್​ಗಾಮ್​ನಲ್ಲಿ ಮೃತಪಟ್ಟವರಲ್ಲಿ ಕೆಲವರು ಕನ್ನಡ ಮಾತನಾಡುವವರಿದ್ದರೆ, ಇನ್ನೂ ಕೆಲವರು ಹಿಂದಿ, ಮರಾಠಿ, ಗುಜರಾತಿ, ಒಡಿಯಾಮ ಬಾಂಗ್ಲಾ ಹೀಗೆ ಒಬ್ಬೊಬ್ಬರು ಒಂದು ಭಾಷೆಯನ್ನು ಮಾತನಾಡುವವರಾಗಿದ್ದಾರೆ. ಆದರೆ ಅವರ ಸಾವಿಗೆ ಆಕ್ರೋಶ ಮಾತ್ರ ಕಾರ್ಗಿಲ್​ನಿಂದ ಕನ್ಯಾಕುಮಾರಿವರೆಗೂ ಒಂದೇ ರೀತಿ ಆಗಿದೆ ಎಂದರು.

ಭಯೋತ್ಪಾದನೆ ಎದುರು ಭಾರತ ಎಂದೂ ತಲೆ ಬಾಗುವುದಿಲ್ಲ, ಭಾರತದಿಂದ ಭಯೋತ್ಪಾದನೆ ತೊಲಗಿಸುವವರೆಗೂ ಬಿಡುವುದಿಲ್ಲ. ಈ ದಾಳಿ ಕೇವಲ ನಿರಾಯುಧ ಪ್ರವಾಸಿಗರ ಮೇಲೆ ನಡೆದಿಲ್ಲ, ದೇಶದ ಶತ್ರುಗಳು ಭಾರತದ ಆತ್ಮದ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ. ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲಾಗದಷ್ಟು ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದಕರ ಬೆನ್ನು ಮುರಿಯಲಿದೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೌರ್ಯದಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ. ಇಡೀ ರಾಷ್ಟ್ರವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. ಈ ಕುಟುಂಬ ಸದಸ್ಯರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗುವಂತೆ ನೋಡಿಕೊಳ್ಳಲು ಸರ್ಕಾರವೂ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.

ಈ ಭಯೋತ್ಪಾದಕ ದಾಳಿಯಲ್ಲಿ, ಯಾರೋ ಒಬ್ಬರು ತಮ್ಮ ಮಗನನ್ನು ಕಳೆದುಕೊಂಡರು, ಯಾರೋ ಒಬ್ಬರು ತಮ್ಮ ಸಹೋದರನನ್ನು ಕಳೆದುಕೊಂಡರು, ಯಾರೋ ಒಬ್ಬರು ತಮ್ಮ ಸಂಗಾತಿಯನ್ನು ಕಳೆದುಕೊಂಡಿದ್ದಾರೆ. ಆ ಎಲ್ಲ ಜನರ ಸಾವಿನ ಬಗ್ಗೆ ನಮ್ಮ ಮನಸ್ಸಿನಲ್ಲಿರುವ ದುಃಖ ಮತ್ತು ಕೋಪ ಒಂದೇ ಆಗಿದೆ ಎಂದರು.

You Might Also Like

ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಅನುವಾದ ದೋಷಗಳ ಖಂಡಿಸಿದ ವಿದ್ಯಾರ್ಥಿಗಳ ಬಂಧನ

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ

‘ವೋಟ್ ಚೋರಿ’ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ ಮಹಾ ರ‍್ಯಾಲಿ

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ

TAGGED:Pahalgam Terror AttackPM Modi
Share This Article
Facebook Copy Link Print
Previous Article Top 10 News ಇಂದಿನ TOP 10 ಸುದ್ದಿಗಳು (23-04-2025)
Next Article ಯುವರಾಜ್‌ ಕುಮಾರ್‌ ಅಭಿನಯದ ‘ಎಕ್ಕ’ ಚಿತ್ರದ ಟೀಸರ್‌ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up