ನವದೆಹಲಿ : ಭಾರತ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಯುದ್ಧಕ್ಕೆ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಫ್ ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಅಮೆರಿಕಾದ ನಡುವೆ ಕದನ ವಿರಾಮ ಜಾರಿಯಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ Xನಲ್ಲಿ ಬರೆದುಕೊಂಡಿದ್ದು. ಈ ಕದನ ವಿರಾಮ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಡೊನಾಲ್ಡ್ ಟ್ರಂಪ್ X ಮಾಡಿದ್ದು “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

