ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್, ಇಂದು ಬೆಳಗ್ಗೆಯಿಂದ 12 ಸೆಕೆಂಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದೇವೆ ಎಂದರು.

