ತುಮಕೂರು: ನಗರದ ಬಿವಿಬಿ ಇಂಜಿನಿಯರಿಂಗ್ (Engeneering) ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ರಾಜಕೀಯಕ್ಕೂ ಈ ಕೊಲೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ನೇಹಾ ಮತ್ತು ಆರೋಪಿ ಫಯಾಜ್ ಪರಸ್ವರ ಪ್ರೀತಿಸುತ್ತಿದ್ದರು. ನಂತರ ನೇಹಾ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಕಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಇದರಲ್ಲಿ ಲವ್ ಜಿಹಾದ್ ಕಂಣಡು ಬಂದಿಲ್ಲ. ನನ್ನನ್ನು ಬಿಟ್ಟು ಬೇಋಎಯವನ್ನನ್ನು ಮದುವೆಯಾಗುತ್ತಿಯಾ ಎಂದು ಕೋಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದರ ಎಂದಿದ್ದಾರೆ. ಜೊತೆಗೆ ಆರೋಪಿ ಫಯಾಜ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದನ್ನೂ ಓದಿ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

