Dharmasthala : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾನೂನು ಪ್ರಕಾರ, ಏನು ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಾಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ ಎಸ್‌ಐಟಿ ತನಿಖೆಯನ್ನು ಮುಂದುವರೆಸಬಹುದೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದರು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

