ಬೆಂಗಳೂರು: ಜರ್ಮನಿಗೆ (Germany) ತೆರಳಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಈಗ ದುಬೈಗೆ (Dubai) ಶಿಫ್ಟ್ ಆಗಿದ್ದಾರೆ.
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಬುಧವಾರ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ ತಂಡದ ಬಳಿ ಮನವಿ ಮಾಡಿದ್ದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
ಈಗ ಜರ್ಮನಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿ ದುಬೈಗೆ ಬಂದಿದ್ದಾರೆ. ದುಬೈಗೆ ಬಂದ ಹಿನ್ನೆಲೆಯಲ್ಲಿ ನೇರವಾಗಿ ಪ್ರಜ್ವಲ್ ರೇವಣ್ಣ ಶೀಘ್ರವೇ ಬೆಂಗಳೂರಿಗೆ ಬರುತ್ತಾರಾ ಎಂಬ ಪ್ರಶ್ನೆ ಎದ್ದಿದೆ. . ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್‌ಪೋರ್ಟ್ ರದ್ದುಪಡಿಸಬೇಕೆಂಬ ಆಗ್ರಹ ಕೇಳಿ ಬಂದಿದೆ. . ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್