ಬೆಂಗಳೂರು : ನಾಳೆ ಸ್ವಾತಂತ್ರ್ಯ ದಿನಾಚರಣೆ, ನಾಡಿದ್ದು ವರಮಹಾಲಕ್ಷ್ಮಿ ಹಬ್ಬ ಹಾಗೂ ವಾರಾಂತ್ಯದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ನಗರದ ಜನತೆ ಊರು ಮತ್ತು ಪ್ರವಾಸಿತಾಣಗಳತ್ತ ತೆರಳುತ್ತಿದ್ದಾರೆ.
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ 450 ಬಸ್ ಗಳ ಕಾರ್ಯಾಚರಣೆಗೆ ಇಳಿಸಲಾಗಿದೆ.
ರಾಜ್ಯದ ಒಳಗಡೆ ಹೆಚ್ಚುವರಿಯಾಗಿ 450 ಹಾಗೂ ಅಂತರರಾಜ್ಯಕ್ಕೆ 60 ಬಸ್ ಗಳ ನಿಯೋಜನೆ ಮಾಡಲಾಗಿದೆ. ಮುಗಂಡವಾಗಿ 150 ಬಸ್ಗಳನ್ನ ಬುಕ್ ಮಾಡಿರೋ ಪ್ರಯಾಣಿಕರು.
ಈಗಾಗಲೇ ಕೆಲವರು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದು, ಇಂದು ಸಂಜೆಯೇ ತಮ್ಮ ತಮ್ಮ ಊರು ಹಾಗೂ ಪ್ರವಾಸಿತಾಣಗಳಿಗೆ ಪ್ರಯಾಣ ಮಾಡಲಿದ್ದಾರೆ.
ರಾಜ್ಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಪ್ರಕೃತಿ ಕೈ ಬೀಸಿ ಕರೆಯುತ್ತಿದೆ. ಕಾಫಿ ನಾಡು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು,
ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಪ್ರವಾಸಿ ತಾಣಗಳಲ್ಲಿ ಈಗಾಗಲೇ ಲಾಡ್‌್ಜ, ಹೋಂ ಸ್ಟೆ, ಹೊಟೇಲ್‌ಗಳಲ್ಲಿ ಬುಕ್ಕಿಂಗ್ ಮಾಡಿದ್ದಾರೆ. ಇನ್ನೂ ಕೆಲವರು ಸುಮ್ನೆ ಪ್ರವಾಸ ಅಂತಾ ಹಣ ಖರ್ಚ್ ಅಂತ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.
ಇಂದು ಕೆಲಸ ಮುಗಿಸಿಕೊಂಡು ರಾತ್ರಿಯೇ ಕುಟುಂಬ ಸದಸ್ಯ ರೊಂದಿಗೆ ಪ್ರಯಾಣ ಬೆಳೆಸಲಿದ್ದು, ಮೆಜೆಸ್ಟಿಕ್, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ , ಶಾಂತಿನಗರ ಸೇರಿದಂತೆ ಮತ್ತಿತರ ಪ್ರಮುಖ ನಿಲ್ದಾಣಗಳಲ್ಲಿ ಸಾರಿಗೆ ಬಸ್‌ಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

