ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ (BJP) ಪಕ್ಷಕ್ಕೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈ ಕೋರ್ಟ್ (High Court) ಸೋಮವಾರ (ಏಪ್ರಿಲ್ 29) ವಿಚಾರಣೆ ನಡೆಸಲಿದೆ.
ಏ.9 ರಂದು ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ (speech) ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ
ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ ಎಂದರು. ಇದನ್ನೂ ಓದಿ: ಹಲವಾರು ದೇಗುಲಗಳಲ್ಲಿ ಪೂಜೆ ಮಾಡಿದ ಬಳಿಕ ಮತ ಚಲಾಯಿಸಿ ಮಾಜಿ ಪ್ರಧಾನಿ ಹೆಚ್‌ಡಿಡಿ
ಪ್ರಧಾನ ಮಂತ್ರಿಯವರ ಭಾಷಣಗಳು ಮತದಾರರಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ. ಪ್ರಧಾನಿ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುತ್ತವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951 ರ ಅಡಿಯಲ್ಲಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದೆ. ಲೋಕಸಭೆ ಚುನಾವಣೆಯ ಮತದಾನದ ದಿನಾಂಕವು ಅತ್ಯಂತ ವೇಗವಾಗಿ ಸಮೀಪಿಸುತ್ತಿರುವ ಹಿನ್ನಲೆ ಚುನಾವಣಾ ಆಯೋಗದಿಂದ ನ್ಯಾಯಯುತ ಕ್ರಮಕ್ಕೆ ತಕ್ಷಣ ನಿರ್ದೇಶಿಸಲು ಹೈಕೋರ್ಟ್ಗೆ ಮನವಿ ಮಾಡಿದೆ. ಇದನ್ನೂ ಓದಿ: ನಿಮ್ಮ ಹಕ್ಕನ್ನು ಚಲಾಯಿಸಿ: ವೋಟ್ ಮಾಡಿದ ಬಳಿಕ ಮನವಿ ಮಾಡಿದ ಗೋಲ್ಡನ್ ಸ್ಟಾರ್

