ಬೆಂಗಳೂರು: ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಲಾಗಿದೆ.
ಸಿಐಡಿ ವರ್ಗಾವಣೆ ಬಳಿಕ ಡಿವೈಎಸ್ಪಿ ಪೃಥ್ವಿ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು. ಈಗ ಪೃಥ್ವಿ ಸಿಐಡಿಯಿಂದ (CID) ವರ್ಗಾವಣೆ ಹಿನ್ನೆಲೆ ಪ್ರಕರಣದ ತನಿಖಾಧಿಕಾರಿಯಾಗಿ ಡಿವೈಎಸ್ಪಿ ಪುನೀತ್ ನೇಮಕಗೊಂಡಿದ್ದಾರೆ. ಸಿಐಡಿ ಡಿವೈಎಸ್ಪಿ ಪುನೀತ್ ಅವರು ಬಿಎಸ್ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಜೂನ್ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ಎದುರಿಸುತ್ತಿದ್ದು, ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ಇಂದು ಸಿಐಡಿ ಮುಂದೆ ಹಾಜರಾಗಿದ್ದಾರೆ. ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್ಐಆರ್ ದಾಖಲಾಗಿತ್ತು.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು