ಹಾಸನ : ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.ಮನು ಬಂಧಿತ ಆರೋಪಿ.
ಹಾಸನ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬುಧವಾರ ರಾತ್ರಿ 2 ಸುಮಾರಿಗೆ ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್‌ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರೆದು ಸೆರೆಹಿಡಿದಿದ್ದಾರೆ.
ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.
ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

