ಕುಣಿಗಲ್: ಪಟ್ಟಣದ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನವೀನ ಗೌಡ ಎಸ್ ಬಿ ರವರು ಅನಿರೀಕ್ಷಿತವಾಗಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಬಗ್ಗೆ ಯೋಗಕ್ಷೇಮ ಆರೋಗ್ಯದ ಬಗ್ಗೆ ವಿಚಾರಿಸಿದರು.
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ಆರೋಗ್ಯ ಪರಿಸರದ ಬಗ್ಗೆ ಪರಿಶೀಲನೆ ನಡೆಸಿದರು.
ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ಊಟ ವಸತಿ ವ್ಯವಸ್ಥೆಗಳ ಬಗ್ಗೆ ಸಮರ್ಪಕವಾಗಿ ನಿಲಯದ ಮೇಲ್ವಿಚಾರಕರು ಗಮನಹರಿಸಿ ಕಾಲಕಾಲಕ್ಕೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
ಯಾವುದೇ ಒಂದು ಸಮಸ್ಯೆ ಉಂಟಾದರೆ ದಯವಿಟ್ಟು 112ಗೆ ದೂರವಾಣಿ ಕರೆ ಮಾಡಿದರೆ ನಮ್ಮ ಪೊಲೀಸ್ ಇಲಾಖೆಯವರು ತಕ್ಷಣವೇ ನಿಮ್ಮ ಸಹಾಯಕ್ಕೆ ಧಾವಿಸುವುದೆಂದು ತಿಳಿಸಿದರು.
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಆದ್ಯತೆ ನೀಡಿ ನಿಮ್ಮ ಪೋಷಕರಿಗೆ ತಂದೆ ತಾಯಿಗಳಿಗೆ ಉತ್ತಮ ಮಕ್ಕಳಾಗಿ ಸಮಾಜಕ್ಕೆ ಒಳ್ಳೆ ಮಾದರಿಯಾಗಿ ಮುಖ್ಯವಾಹಿನಿಗೆ ಬರಬೇಕೆಂದು ವಿದ್ಯಾರ್ಥಿನಿಯರಿಗೆ ಕಿವಿ ಮಾತನ್ನು ಹೇಳಿದರು.

