ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗಳನ್ನ ಬಂಧಿಸಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.
ಈ ನಡುವೆ ನಟ ದರ್ಶನ್ ಸಂಜೆ 4.30ರ ವೇಳೆಗೆ ಪೊಲೀಸರಿಗೆ ಶರಣಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ತಮಿಳುನಾಡಿಗೆ ಹೋಗಿರುವ ನಟ ದರ್ಶನ್ ಮಹದೇಶ್ವರ ಬೆಟ್ಟದ ಬಳಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಬೆಂಗಳೂರಿತ್ತ ಬರುತ್ತಿರುವ ದರ್ಶನ್ ಸಂಜೆ ಪೊಲೀಸರ ಬಳಿ ಶರಣಾಗಲಿದ್ದಾರೆ ಎನ್ನಲಾಗಿದೆ.
ಇತ್ತ ಆರೋಪಿ 1 ಪವಿತ್ರಾಗೌಡ ಮನೆಗೆ ಪೊಲೀಸರು ಆಗಮಿಸಿದ್ದು ಬಂಧಿಸುವ ಸಾಧ್ಯತೆ ಇದೆ. ಈ ನಡುವೆ ನಟ ದರ್ಶನ್ ಗೆ ಶರಣಾಗಲು ಅವಕಾಶವಿದ್ದು ಶರಣಾಗಲಿಲ್ಲವಾದರೇ ಪೊಲೀಸರ ಬಂಧಿಸಲಿದ್ದಾರೆ. ಬಳಿಕ ಕೋರ್ಟ್ ಗೆ ಹಾಜರುಪಡಿಸಲಿದ್ದು ನಟ ದರ್ಶನ್ ಮತ್ತೆ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.
ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ ಪೋಸ್ಟ್ :
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ನಟಿ ರಮ್ಯಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ. ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ತಿಳಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

