By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

BlogTop Storiesರಾಜಕೀಯ | Politicsರಾಜ್ಯ-Karnataka

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

Political development in Munirathna's case: Lakshmi Hebbalkar visits Chaluvaraju's house

Published September 16, 2024
Share
2 Min Read
Munirathna
SHARE

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಆಡಿಯೋ ಪ್ರಕರಣ ಇದೀಗ ರಾಜಕೀಯ ತಿರುವನ್ನು ಪಡೆದುಕೊಳ್ಳುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವುದಾಗಿ ಹೇಳಿದರು. ಕಳೆದ ಎರಡು ದಿನಗಳಿಂದ ಮಾಧ್ಯಮದಲ್ಲಿ ಬರುತ್ತಿರುವ ವಿಚಾರವನ್ನು ಸೂಕ್ಷ್ಮವಾಗಿ ಸರ್ಕಾರ ಗಮನಿಸುತ್ತಿದೆ.

ಮಹಿಳೆಯಾಗಿ ಇನ್ನೊಬ್ಬ ಮಹಿಳೆಗೆ ಧೈರ್ಯ ತುಂಬುವ ಕೆಲಸ ಮಾಡ್ವೇಕು ಅಂತಾ ಬಂದಿರುವೆ. ಆಡಿಯೋ ಕೇಳಿಸಿಕೊಡಿಲ್ಲ, ಅಸಹ್ಯವಾಗಿ ಇದೆ ಅಂತ ಕೇಳಿದವರು ಹೇಳುತ್ತಾರೆ. ಗುತ್ತಿಗೆದಾರ ಚಲುವರಾಜು ಜೊತೆ ಸರ್ಕಾರ ಇರುತ್ತದೆ. ಅವರ ಕುಟುಂಬದ ರಕ್ಷಣೆ ಜವಾಬ್ದಾರಿ ಸರ್ಕಾರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗುತ್ತಿಗೆದಾರನ ಮೇಳೆ ಮಾಜಿ ಮಂತ್ರಿಗಳು ಜಾತಿ ನಿಂದನೆ ಮಾಡುವುದು ಸರಿಯಲ್ಲ. ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮುನಿರತ್ನ ಅವರ ಮಾತುಗಳಿಂದ ಚಲುವರಾಜು ಕುಟುಂಬ ಖಿನ್ನತೆಗೆ ಒಳಪಟ್ಟಿದೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡುವುದಕ್ಕೆ ಧೈರ್ಯ ಹೇಳುವುದಕ್ಕೆ ಅವರ ಮನೆಗೆ ಭೇಟಿ ನೀಡಿರುವೆ ಎಂದು ಸಚಿವರು ಹೇಳಿದರು.

ಮುನಿರತ್ನ ಕುರಿತ ಇನ್ನೂ ಎರಡು ಆಡಿಯೋ ನಾಳೆ ಬಿಡುಗಡೆ :
ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಗಳು ಇವೆ. ಅವುಗಳನ್ನ ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ತಿಳಿಸಿದ್ದಾರೆ.ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗುತ್ತಿಗೆದಾರ ಚಲುವರಾಜು, ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30 ಪರ್ಸೆಂಟ್ ಕಮಿಷನ್ ವಿಚಾರದ ಆಡಿಯೋ ಇದೆ. ಇವುಗಳನ್ನ ನಾಳೆ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.ನನಗೆ ಶಾಸಕ ಮುನಿರತ್ನರಿಂದ ಜೀವಭಯವಿದೆ. ನನಗೆ ಭದ್ರತೆ ಬೇಕಿದೆ ಎಂದು ಚಲುವರಾಜು ತಿಳಿಸಿದ್ದಾರೆ.

ಮುನಿರತ್ನಗೆ ಕಠಿಣ ಶಿಕ್ಷೆ ಆಗಬೇಕು ಪುಷ್ಪ ಅಮರನಾಥ್ :
ಮುನಿರತ್ನ ಅಂತ ಹೆಸರು ಇಟ್ಟುಕೊಂಡು ಇಂತ ನೀಚ ಮಾತುಗಳನ್ನಾಡುವ ಈತನಿಗೆ ಕಠಿಣ ಶಿಕ್ಷೆ ಆಗಬೇಕು. ಮುನಿರತ್ನ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪ ಅಮರನಾಥ್, ಶಾಸಕ ಮುನಿರತ್ನ ಅವರ ಅವಹೇಳನಕಾರಿ ಆಡಿಯೋ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದರು. ಅವನ ಹೆಸರು ಹೇಳಲಿಕ್ಕೂ ಅಸಹ್ಯವಾಗುತ್ತದೆ. ಮಹಿಳೆಯರು, ದಲಿತರ ಅಂದರೆ ಏನೆಂದುಕೊಂಡಿದ್ದಾರೆ ಇವರು? ಬಿಜೆಪಿ ನಾಯಕರ ಮನಸ್ಥಿತಿ ಏನು ಅಂತ ಇಂತ ಬಿಜೆಪಿ ನಾಯಕರ ಮಾತಿನಿಂದ ವ್ಯಕ್ತವಾಗುತ್ತದೆ.

ಈ ವಿಚಾರವಾಗಿ ಬಿಜೆಪಿ ನಾಯಕರು ತುಟಿ ಬಿಚ್ಚುತ್ತಿಲ್ಲ ಯಾಕೇ.? ಮುನಿರತ್ನ ಅವರ ರಾಜೀನಾಮೆ ಪಡೆದು ಆತನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ವಜಾ ಮಾಡಬೇಕು. ತಾಕತ್ತು ದಮ್ಮುಗಳ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಈತನ ಮೇಲೆ ಕ್ರಮ ಕೈಗೊಳ್ಳಲಿ. ಮುನಿರತ್ನ ರಾಜಿನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

You Might Also Like

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿ ಮತ್ತೆ ಮದ್ಯ ದರ ಪರಿಷ್ಕರಣೆ ಆಗುತ್ತಾ..?

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ

ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ

TAGGED:Lakshmi HebbalkarMunirathna
Share This Article
Facebook Copy Link Print
Previous Article R Ashok And CT Ravi ಕಾಂಗ್ರೆಸ್ ಸರ್ಕಾರ ಬಂದಮೇಲೆ ದೇಶವಿರೋಧಿ ಶಕ್ತಿಗಳಿಗೆ ಭಯವೇ ಇಲ್ಲದಂತಾಗಿದೆ : ಆರ್.‌ ಅಶೋಕ್‌ ಆತಂಕ
Next Article Sharan Prakash Patil ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up